ಉಡುಪಿ:ಕೊರೋನ ಪಾಸಿಟಿವ್ ಗೆ 70 ವರ್ಷದ ವೃದ್ಧ ಬಲಿ

ಉಡುಪಿ, ಜು.12: ಕೊರೋನ ವೈರಸ್ ಸೋಂಕಿಗೆ ಪಾಸಿಟಿವ್ ಆಗಿದ್ದ ದಾವಣಗೆರೆ ಮೂಲದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

ಸುಮಾರು 70 ವರ್ಷದ ದಾವಣಗೆರೆ ಮೂಲದ ವೃದ್ಧರೊಬ್ಬರನ್ನು ಮೂರು ದಿನಗಳ ಹಿಂದೆ ಅನಾರೋಗ್ಯದ ಕೊರೊನಾ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಜೂ.10ರಂದು ಉಡುಪಿ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಅಂತ್ಯಸಂಸ್ಕಾರ ಕೋವಿಡ್-19 ಮಾರ್ಗಸೂಚಿ ಪ್ರಕಾರ ಉಡುಪಿಯಲ್ಲಿ ನೆರವೇರಲಿದೆ.

Leave a Reply

Your email address will not be published. Required fields are marked *

error: Content is protected !!