ಪಡುಬಿದ್ರಿ: ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿ ವಶಕ್ಕೆ

ಪಡುಬಿದ್ರಿ ಅ.20 (ಉಡುಪಿ ಟೈಮ್ಸ್ ವರದಿ): ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪಡುಬಿದ್ರಿ -ಕಾರ್ಕಳ ಜಂಕ್ಷನ್ ಬಳಿ ಇರುವ ಸಾರ್ವಜನಿಕ ಸ್ಥಳದಲ್ಲಿ ನಡೆದಿದೆ.
 
ಹಾವೇರಿ ಮೂಲದ ಬಸವರಾಜ ಬಸವಣ್ಣ ತೊಟಗೇರ (34) ಪೊಲೀಸರು ವಶಕ್ಕೆ ಪಡೆದವರು.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಶೋಕ್ ಕುಮಾರ್ ಅವರು ಇತರ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಸ್ಥಳದಲ್ಲಿ ಓರ್ವ ವ್ಯಕ್ತಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದೂದು ಕಂಡು ಬಂದಿದೆ. ಈ ವೇಳೆ ವ್ಯಕ್ತಿಯನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ 1,040 ರೂ. ನಗದು ಹಾಗೂ ಇತರ ಸ್ವತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಪಡುಬದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!