ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೋನಾ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಸಮುದಾಯ ಹಂತಕ್ಕೆ ತಲುಪಿದ್ದು, ಇಂದು ಮಂಗಳೂರು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಮನಪಾ ಆಯುಕ್ತರಿಗೆ ಎರಡು ದಿನಗಳ ಹಿಂದೆ ಜ್ವರದ ಲಕ್ಷಣಗಳು ಕಂಡುಬಂದಿದ್ದವು. ಈ ಕಾರಣದಿಂದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಅವರ ಗಂಟಲು ದ್ರವ ಪರೀಕ್ಷಾ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ.

ಸದ್ಯ ಮನಪಾ ಆಯುಕ್ತರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!