ಕರಾವಳಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆ
ಉಡುಪಿ ಅ.21(ಉಡುಪಿ ಟೈಮ್ಸ್ ವರದಿ): ಕರಾವಳಿಯಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯಲ್ಲಿಮುಂದಿನ ಮೂರು ಗಂಟೆಗಳ ಕಾಲ ಸಿಡಿಲು, ಮಿಂಚು ಸಹಿತ ಭಾರೀ ಗಾಳಿ ಮಳೆಯಾಗಲಿದ್ದು, ಗಾಳಿ ಗಂಟೆಗೆ 30 ರಿಂದ40 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಇಲಾಖೆ ಸೂಚನೆ ನೀಡಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಸಹಿತ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.