ಉಡುಪಿ: ಮಾದಕ ವಸ್ತು ಮಾರಾಟ- ಓರ್ವನ ಬಂಧನ

ಉಡುಪಿ ಅ.22 (ಉಡುಪಿ ಟೈಮ್ಸ್ ವರದಿ): ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಕುಂದಾಪುರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. 

ಕಾರವಾರದ ಮಹಮ್ಮದ್ ಜಾಫರ್ ಗುಡುಮಿಯಾ‌ (28) ಬಂಧಿತ ಆರೋಪಿ. ಬಂಧಿತನಿಂದ ಅಂದಾಜು 40,000 ರೂ. ಮೌಲ್ಯದ 1 ಕೆಜಿ 800 ಗ್ರಾಂ ತೂಕದ ಗಾಂಜಾ ಹಾಗೂ ಅಂದಾಜು 10,000 ರೂ. ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 2 ಮೊಬೈಲ್ ಫೋನ್, 1,500 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅ.21 ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷುವರ್ಧನ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಕುಂದಾಪುರ ಪೊಲೀಸ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ರವರು ರಾತ್ರಿ ರೌಂಡ್ ಕರ್ತವ್ಯದಲ್ಲಿ ಸಮಯ ಕುಂದಾಪುರದ ಶಾಸ್ತ್ರೀ ಪಾರ್ಕ್ ಬಳಿ ಇದ್ದ ಯುವಕನನ್ನು ಕಂಡು ಅನುಮಾನಗೊಂಡು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡುತ್ತಿದ್ದೂದು ತಿಳಿದು ಬಂದಿದೆ. ಈ ವೇಳೆ ಆರೋಪಿಯನ್ನು ಬಂಧಿಸಿ ಆತನ ಬಳಿ ಇದ್ದ ಗಾಂಜಾ ಹಾಗೂ ಬ್ರೌನ್ ಶುಗರ್’ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತನ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಚರಣೆಯಲ್ಲಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯ ಅಪರಾಧ ವಿಭಾಗದ ಸಿಬ್ಬಂದಿಯವರಾದ ರಾಘವೇಂದ್ರ ಉಪ್ಪುಂದ, ರಾಮು ಹಗೆ, ವಿಜಯ ಕುಮಾರ್‌, ರಮೇಶ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ ರಾಘವೇಂದ್ರ ಮೊಗೇರ ಮತ್ತು ವಿಜೇತ್ ಹಾಗೂ ಜೀಪು ಚಾಲಕರಾದ ರಾಜುರವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!