ಕಾಪು: ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು
ಕಾಪು ಅ.23: ನಡೆದು ಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ಯೂನಿಯನ್ ಬ್ಯಾಂಕ್ ಬಳಿ ನಡೆದಿದೆ.
ಮೂಳೂರು ಪಡು ನಿವಾಸಿ ಆಯಿಶಾ (42) ಮೃತ ದುರ್ದೈವಿ. ಅಗತ್ಯ ವಸ್ತು ಖರೀದಿಸಲು ಪೇಟೆಗೆ ಬಂದಿದ್ದ ಅವರು ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಗಳೂರಿನತ್ತ ತೆರಳುತ್ತಿದ್ದ ಕಾರೊಂದು ಆಯಿಶಾ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.