ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ಸಿದ್ದರಾಮಯ್ಯ ಪ್ರವೀಣರಲ್ಲವೇ- ಬಿಜೆಪಿ ಲೇವಡಿ
ಬೆಂಗಳೂರು, ಅ. 23 : ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ ಮಜಾವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಮೊದಲ ಶ್ರೇಣಿಯಲ್ಲಿ ನಿಲ್ಲುವವರು ಸಿದ್ದರಾಮಯ್ಯ ಎಂದು ಬಿಜೆಪಿ ವ್ಯಂಗ್ಯ ವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, “ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ ಮಜಾವಾದಿ ರಾಜಕಾರಣಿಗಳ ಪಟ್ಟಿಯಲ್ಲಿ ಮೊದಲ ಶ್ರೇಣಿಯಲ್ಲಿ ನಿಲ್ಲುವವರು ಸಿದ್ದರಾಮಯ್ಯ. ತಾವು ಮುಖ್ಯಮಂತ್ರಿಯಾಗಿದ್ದಾಗ ಕೇವಲ 4 ವರ್ಷದ ಅವಧಿಯಲ್ಲಿ ಸಾಲ ಎತ್ತುವಳಿಯನ್ನು 4 ಲಕ್ಷ ಕೋಟಿಗೆ ತಲುಪಿಸಿದ್ದೇ ಸಿದ್ದರಾಮಯ್ಯ ಸಾಧನೆ” ಎಂದಿದೆ.
ಸಿದ್ದರಾಮಯ್ಯ ಅವರೇ, ಕೃಷ್ಣಾ ಕಣಿವೆ ನೀರಾವರಿ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ಅನುದಾನ ನೀಡುತ್ತೇನೆಂದು ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದಿರಿ. ಆದರೆ ಕೊಟ್ಟಿದ್ದು ಬಿಡಿಗಾಸು. ಅಂಗೈಯಲ್ಲಿ ಆಕಾಶ ತೋರಿಸುವ ವಿಚಾರದಲ್ಲಿ ನೀವು ಪ್ರವೀಣರಲ್ಲವೇ ಸಿದ್ದರಾಮಯ್ಯ?” ಎಂದು ಕೇಳಿದೆ.