ಒಂದೂವರೆ ವರ್ಷದ ಬಳಿಕ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು…

ಬೆಂಗಳೂರು, ಅ.25: ರಾಜ್ಯಾದ್ಯಂತ ಇಂದು 1 ರಿಂದ 5 ನೇ ತರಗತಿಗಳು ಆರಂಭಗೊಂಡಿದ್ದು ಒಂದುವರೆ ವರ್ಷದ ಬಳಿಕ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ.

ಕರಾವಳಿಯ ಉಡುಪಿ ಜಿಲ್ಲೆಯಲ್ಲಿಯೂ ಮುಂಜಾಗೃತಾ ಕ್ರಮದೊಂದಿಗೆ ಶಾಲೆಗಳು ಆರಂಭಗೊಂಡಿದೆ. ಕೋವಿಡ್ ಭೀತಿಯಿಂದ ಮುಚ್ಚಿದ್ದ ಶಾಲೆಗಳಲ್ಲಿ ಮಕ್ಕಳ ಕಲರವ ಕೇಳಿಸುತ್ತಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು ಕ್ರಮೇಣ ಇಳಿಮುಖವಾಗುತ್ತಿವೆ ಯಾದರೂ ಸೋಂಕನ್ನು ನಿರ್ಲಕ್ಷ್ಯಿಸುವಂತಿಲ್ಲ. ಆದ್ದರಿಂದ ಶಾಲೆಗೆ ಹಾಜರಾಗುವ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಸರಕಾರ 1 ರಿಂದ 5 ನೇ ತರಗತಿ ಆರಂಭದ ಕುರಿತಾಗಿ ಕೆಲವೊಂದು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ ಅದರಂತೆ ಸರ್ಕಾರ ಆದೇಶದ ಪ್ರಕಾರ ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಬೇಕು.

ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್‍ಗೆ ಅವಕಾಶ ನೀಡಬೇಕು.ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದ್ದು, ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರುರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೊರೊನಾ ಸೋಂಕು ಇಲ್ಲ ಎಂದು ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ.ಆನ್ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದ್ದು, ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿದ್ದು, ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ ಎಂದು ಸರ್ಕಾರ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!