ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ- ಅಪರಾಧಿಗೆ 10 ವರ್ಷ ಸಜೆ ವಿಧಿಸಿದ ಪೋಕ್ಸೋ ಕೋರ್ಟ್

ಉಡುಪಿ: ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ಆತ ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ. 30 ವರ್ಷ ಪ್ರಾಯದ ವೆಂಕಟೇಶ ಎನ್ನುವಾತ ಶಿಕ್ಷೆಗೊಳಗಾದ ಅಪರಾಧಿ.

ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

ಘಟನೆ ವಿವರ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಈ ಘಟನೆ ನಡೆದಿತ್ತು. ಪ್ರಸ್ತುತ ಅಪರಾಧಿಯಾದ ವೆಂಕಟೇಶ್ ಮನೆಗೆ ಆಟ ಆಡಲೆಂದು ನೊಂದ ಐದು ವರ್ಷದ ಬಾಲಕಿ ತೆರಳಿದ್ದ ವೇಳೆ ಆಕೆ ಮೇಲೆ‌ ಲೈಂಗಿಕ ದೌರ್ಜನ್ಯಕ್ಕೆ ನಡೆಸಿದ್ದ. ಮನೆಯಲ್ಲಿ ಅಸ್ವಸ್ಥಳಾಗಿದ್ದರಿಂದ ತಾಯಿ ಕಷಾಯ ಮಾಡಿ ಕೊಟ್ಟಿದ್ದರು. ಆದರೆ ಬಾಲಕಿ ವಿಪರೀತವಾಗಿ ಅನಾರೋಗ್ಯಕ್ಕೀಡಾದಾಗ ಕಾರ್ಕಳ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಣಿಪಾಲ‌ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಾದ್ಯೆ ಮಗು ತನ್ನ‌ ಮೇಲೆ ನಡೆದ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದು ಈ ಬಗ್ಗೆ ದೂರುದಾರರು ನೀಡಿದ  ದೂರಿನಂತೆ ಕಾರ್ಕಳ ಠಾಣೆಯ ಅಂದಿನ ಉಪನಿರೀಕ್ಷಕ ನಂಜಾ ನಾಯ್ಕ್ ಪ್ರಕರಣ ದಾಖಲಿಸಿಕೊಂಡಿದ್ದರು.
ಅಂದಿನ ಕಾರ್ಕಳ ಸಿಪಿಐ ಜಾಯ್ ಅಂತೋನಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಶಿಕ್ಷೆ ಪ್ರಮಾಣ: ನ್ಯಾಯಾಲಯದಲ್ಲಿ ಒಟ್ಟು19 ಮಂದಿ ಸಾಕ್ಷಿಗಳ ಪೈಕಿ 12 ಮಂದಿ ವಿಚಾರಣೆ ನಡೆದಿದ್ದು ವೈದ್ಯಕೀಯ ದಾಖಲೆಗಳು, ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷ್ಯಾಧಾರಗಳು ಅಭಿಯೋಜನೆ ಪರವಾಗಿದ್ದು ಅಪರಾಧಿ ವೆಂಕಟೇಶನಿಗೆ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ 10 ವರ್ಷ ಕಠಿಣ ಸಜೆ, 20 ಸಾವಿರ ದಂಡ (ದಂಡದ ಮೊತ್ತದಲ್ಲಿ 15 ಸಾವಿರ ಸಂತ್ರಸ್ತೆಗೆ, 5 ಸಾವಿರ ಸರಕಾರಕ್ಕೆ), ಮತ್ತು ಸಂತ್ರಸ್ತೆಗೆ 75 ಸಾವಿರ ಪರಿಹಾರ ನೀಡಲು ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!