ಠಾಣೆಯೊಳಗೆ ರಾಜಿ ಸಂಧಾನದ ನಡೆಸಿದರೆ ಕಾನೂನು ಕ್ರಮ- ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ಬೆಂಗಳೂರು, ಅ.26: ಪೊಲೀಸ್ ಠಾಣೆಯೊಳಗೆ ರಾಜಿ, ಸಂಧಾನದ ಕೆಲಸ ನಡೆಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಾತನಾಡಿದ ಅವರು, ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಹಾಲಕ್ಷ್ಮೀ ಲೇಔಟ್‍ನಲ್ಲಿರುವ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಮನೆಯಲ್ಲಿ ಎಸಿಪಿ ವೆಂಕಟೇಶ್‍ನಾಯ್ಡು ಪರಿಶೀಲನೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಪೊಲೀಸ್ ಠಾಣೆಗಳಲ್ಲಿ ರಾಜಿ ಸಂಧಾನದ ಕೆಲಸ ನಡೆಯಬಾರದು. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸೂಚನೆ ನೀಡಿ ಪೊಲೀಸ್ ಠಾಣೆಯೊಳಗೆ ರಾಜಿ, ಸಂಧಾನದ ಕೆಲಸ ನಡೆಸಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.