ದಕ: ಗುರುವಾರದಿಂದ 7 ದಿನ ಸಂಪೂರ್ಣ ಲಾಕ್ ಡೌನ್
ಮಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಒಂದು ವಾರ ಲಾಕ್ ಡೌನ್ ಜಾರಿಯಾಗಲಿದೆ ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇಂದು ನಡೆದ ಸಿಎಂ ಮತ್ತು ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಸಂವಾದದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಗುರುವಾರದಿಂದ 7 ದಿನಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಿರಲಿದ್ದು ಈ ಕುರಿತ ಮಾರ್ಗಸೂಚಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಬುಧವಾರದವರೆಗೆ ಜನರಿಗೆ ಅಗತ್ಯ ವಸ್ತುಗಳ ಖರೀದಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕೋಟ ಹೇಳಿದ್ದಾರೆ.