ಕಾರ್ಕಳ: ಯದ್ವಾತದ್ವಾ ಬೈಕ್ ಚಲಾಯಿಸಿದ  ಸವಾರ- ಪ್ರಕರಣ ದಾಖಲು

ಕಾರ್ಕಳ ಅ.28(ಉಡುಪಿ ಟೈಮ್ಸ್ ವರದಿ): ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಯದ್ವಾತದ್ವಾ ಬೈಕ್ ಚಲಾಯಿಸಿದ  ಸವಾರನೊಬ್ಬನ ವಿರುದ್ಧ ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿನ್ನೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಸಿಬ್ಬಂದಿಗಳೊಂದಿಗೆ ರೌಂಡ್ಸ್ ನಲ್ಲಿದ್ದಾಗ ಪುಲ್ಕೇರಿ ಬೈಪಾಸ್ ಹತ್ತಿರ ರಾ. ಹೆದ್ದಾರಿ 169 ರಲ್ಲಿ ಒಬ್ಬ ದ್ವಿಚಕ್ರ ಸವಾರ ಬೈಕ್ ನ್ನು ಮೂಡಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ  ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ಎಂಬುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!