ಮಣಿಪಾಲ: ಕುಡಿದು ಕಾರು ಚಲಾಯಿಸಿದ ಪೊಲೀಸ್ ಅಧಿಕಾರಿಯ ಮಗ- ಬೈಕ್ ಸವಾರ ಮೃತ್ಯು

ಮಣಿಪಾಲ ಅ.31(ಉಡುಪಿಟೈಮ್ಸ್ ವರದಿ): ಮಂಚಿಕೆರೆಯ ನಾಗಬನ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಉಮೇಶ್ ಮಡಿವಾಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

ಅ.29 ರಂದು ಮಂಚಿಕೆರೆ ನಿವಾಸಿ ಉಮೇಶ್ ಮಡಿವಾಳ ಅವರು ಬೈಕ್ ನಲ್ಲಿ ಮಣಿಪಾಲದ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಂಗ್ ಸೈಡ್ ನಲ್ಲಿ ಬಂದ ಕೇರಳ ರಾಜ್ಯದ ಪೊಲೀಸ್ ಅಧಿಕಾರಿಯೋರ್ವನ ಮಗ ಚಲಾಯಿಸಿಕೊಂಡು ಬಂದ ಕಾರು ಉಮೇಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಉಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

ಕಾರು ಚಾಲಕ ಮದ್ಯದ ಅಮಲಿನಲ್ಲಿ ಅತೀ ವೇಗವಾಗಿ ಕಾರನ್ನು ಚಲಾಯಿಸಿಕೊಂಡು ರ್ಯಾಂಗ್ ಸೈಡ್ ನಲ್ಲಿ ಬಂದು ಉಮೇಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದು ಅಮಾಕರ ಜೀವ ಬಲಿ ಪಡೆದುಕೊಂಡಿದ್ದಾನೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಅಲ್ಲದೆ ಅಪಘಾತ ನಡೆಸಿದ ಕಾರು ಚಾಲಕ, ಪೊಲೀಸ್ ಅಧಿಕಾರಿ ಮಗ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಆರೋಪಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!