ಉಡುಪಿ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪುಣ್ಯತಿಥಿ ಆಚರಣೆ

ಉಡುಪಿ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪುಣ್ಯತಿಥಿಯನ್ನುಇಂದು ಮಂಚಿಕೋಡಿಯ ಮಂಜುಶ್ರೀ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು. 

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಗ ಸಮುದಾಯದ ಹಿರಿಯರು, ಸ್ಥಳೀಯರಾದ ಅಪ್ಪಿಯವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಾಜಿ ನಗರಸಭಾಉಪಾಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿ ಇಂದಿರಾ ಗಾಂಧಿಯವರ ಕಾರ್ಯಕ್ರಮದಡಿ ಮಂಜುಶ್ರೀ ಕಾಲೊನಿ ನಿರ್ಮಾಣಗೊಂಡಿದೆ. ಅವರ ಪುಣ್ಯತಿಥಿಯನ್ನು ಇಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ತಿಳಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಇನೊರ್ವ ಮುಖ್ಯ ಅತಿಥಿ ಅಮೃತ್ ಶೆಣೈ ಮಾತನಾಡಿ ಇಂದಿರಾ ಗಾಂಧಿಯವರು ಈ ದೇಶಕ್ಕೆ ನೀಡಿದ ಮಹತ್ತರವಾದ ಕಾರ್ಯಕ್ರಮಗಳು ಮೀಸಲಾತಿ ಸೌಲಭ್ಯ ಮುಂತಾದ ವಿಷಯಗಳ ಬಗ್ಗೆ ಮಾತನಾಡಿದರು. 

ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ಮಾತನಾಡಿ ಪರಿಶಿಷ್ಟ ಜಾತಿ ವರ್ಗದ ಏಳಿಗೆಗೆ ಅಂಬೇಡ್ಕರ್‌ರವರ ಸಂವಿಧಾನ ಯಾವ ರೀತಿ ಪ್ರಯೋಜನವಾಗಿದೆ ಎಂಬುದರ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿಕೊಂಡ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ ಇನ್ನೂ ಪ್ರತಿ ವರ್ಷ ಇಂದಿರಾ ಗಾಂಧಿಜೀಯವರ ಪುಣ್ಯತಿಥಿಯ ಆಚರಣೆಯನ್ನು ಪ್ರತಿ ಕಾಲೋನಿಗಳಲ್ಲಿ ಆಚರಿಸಲಾಗುವುದು ಎಂದು ತಿಳಿಸಿದರು. 

ವೇದಿಕೆಯಲ್ಲಿ ಸ್ಥಳೀಯರು,ಕೊರಗ ಸಮುದಾಯದ ಮುಖಂಡರಾದ ಸುಂದರ್, ಉಡುಪಿ ಮಾಜಿ ನಗರಸಭಾ ಸದಸ್ಯರಾದ ವಿಜಯ್ ಜತ್ತನ, ಲತಾ ಆನಂದ್ ಶೇರಿಗಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಯತೀಶ್ ಕರ್ಕೇರ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಹಮ್ಮಾದ್, ಕಾಂಗ್ರೆಸ್ ಮುಖಂಡರಾದ ರಮೇಶ್ ಮಲ್ಪೆ, ಕಾರ್ಯಕರ್ತರಾದ ಸಂಜಯ್ ಆಚಾರ್ಯ, ಸ್ಥಳೀಯ ಮುಖಂಡರಾದ ರಾಘವೇಂದ್ರ ನಾಯ್ಕ್, ಶೈಲೇಶ್ ರೈ, ಕರುಣಾಕರ ಪೂಜಾರಿ, ಸುರೇಶ್ ನಾಯ್ಕ್, ವಿಜಯ್ ಮಂಜುಶ್ರೀ ನಗರ, ವೆಂಕಟಪ್ಪ ನಾಯ್ಕ್, ವಿಜಯ್ ಪುತ್ರನ್ ಮಣಿಪಾಲ, ಕುಮಾರಿ ಸಂಜೀವಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು. ಕುಮಾರಿ ಅನುಷಾ‌ರವರು ಪ್ರಾರ್ಥನೆ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ನೀಡಿದರು. ಸಭೆಯಲ್ಲಿ ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಿಠಲ್ ನಾಯ್ಕ್ ಮಂಚಿ ಇವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

Leave a Reply

Your email address will not be published. Required fields are marked *

error: Content is protected !!