ಉಡುಪಿ: ಕೊಡಂಕೂರು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಉಡುಪಿ ಅ.31(ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೊಡಂಕೂರು ಬಳಿ ನಡೆದಿದೆ.
ನಾಗರಾಜ್(42) ಆತ್ಮಹತ್ಯೆ ಮಾಡಿಕೊಂಡವರು. ಅ.28 ರಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ನಾಗರಾಜ್ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ತುರ್ತು ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಅ.30 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.