ಪ್ರಧಾನಿ ಮೋದಿ ಪಾಟ್ನಾ ರ್ಯಾಲಿ ವೇಳೆ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್​​​ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.

ಕಳೆದ ವಾರ ನ್ಯಾಯಾಲಯವು 10 ಆರೋಪಿಗಳ ಪೈಕಿ ಒಂಬತ್ತು ಆರೋಪಿಗಳಾದ ಹೈದರ್ ಅಲಿ ಅಲಿಯಾಸ್ ‘ಬ್ಲ್ಯಾಕ್ ಬ್ಯೂಟಿ’, ನಮನ್ ಅನ್ಸಾರಿ, ಮುಜಿಬುಲ್ಲಾ ಅನ್ಸಾರಿ, ಇಮ್ತಿಯಾಜ್ ಆಲಂ, ಅಹ್ಮದ್ ಹುಸೇನ್, ಫಿರೋಜ್ ಅಸ್ಲಾಂ, ಇಮ್ತಿಯಾಜ್ ಅನ್ಸಾರಿ, ಇಫ್ತಿಕರ್ ಆಲಂ ಮತ್ತು ಅಜರುದ್ದೀನ್ ಖುರೇಷಿ ದೋಷಿಗಳೆಂದು ತೀರ್ಪು ನೀಡಿತ್ತು.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಮೂರ್ತಿ ಗುರ್ವಿಂದರ್ ಸಿಂಗ್ ಅವರು, ನಾಲ್ವರು ಅಪರಾಧಿಗಳಿಗೆ ಮರಣದಂಡನೆ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಮತ್ತು ಒಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

2013ರ ಅಕ್ಟೋಬರ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿ ವೇಳೆ ಪಾಟ್ನಾ ರೈಲು ನಿಲ್ದಾಣದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 6 ಜನ ಸಾವನ್ನಪ್ಪಿ, 90ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು. ಆದರೂ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರದ ರ್ಯಾಲಿಯನ್ನು ಮುಂದುವರೆಸಿದ್ದರು. 

ಈ ಬಾಂಬ್ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆಗಳು ಹೊತ್ತಿರಲಿಲ್ಲ. ಬಳಿಕ ಎನ್​ಐಎ ಈ ಪ್ರಕರಣದ ತನಿಖೆಯ ಜವಾಬ್ದಾರಿ ವಹಿಸಿಕೊಂಡು 2014ರಲ್ಲಿ 11 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿತ್ತು.

Leave a Reply

Your email address will not be published. Required fields are marked *

ಉಡುಪಿ ನ.1(ಉಡುಪಿ ಟೈಮ್ಸ್ ವರದಿ): ಕಡೆಕಾರಿನ ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೇಶನ್ ಇದರ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಮತ್ತು ಸೇವಾ ಚೈತನ್ಯ ಪ್ರಶಸ್ತಿ ಪ್ರದಾನ ಸಮಾರಂಭ ನ. 7 ರಂದು ಸಂಜೆ 5.30 ಕ್ಕೆ ಕಡೆಕಾರಿನ ಬಿಲ್ಲವ ಸೇವಾ ಸಂಘದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ಶಂಕರ್, ಉಡುಪಿ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉದ್ಯಮಿ ಹಾಗೂ  ಕಾರ್ತಿಕ್ ಸಮೂಹ ಸಂಸ್ಥೆಗಳ ಮಾಲಕ  ಹರಿಯಪ್ಪ ಕೋಟ್ಯಾನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ನಿಡಂಬೂರು ಯುವಕ ಮಂಡಲ ಟ್ರಸ್ಟ್‌ ನ ಅಧ್ಯಕ್ಷ ಶ್ರೀನಿವಾಸ ಹೆಗ್ಡೆ, ಸಾಫಲ್ಯ ಟ್ರಸ್ಟ್ ನ ಅಧ್ಯಕ್ಷ ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.

ಚೈತನ್ಯ ಸೋಶಿಯಲ್ ವೆಲ್ಫೇರ್ ಫೌಂಡೇಶನ್’ನ ಪ್ರವರ್ತಕ ಸುನಿಲ್ ಸಾಲ್ಯಾನ್ ಕಡೆಕಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕ ಶಿವಣ್ಣ ಅವರನ್ನು ಸೇವಾ ಚೈತನ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಹಾಗೂ ಕಡೆಕಾರು ಶ್ರೀ ದುರ್ಗಾಂಬಿಕಾ ಮಹಿಳಾ ಯಕ್ಷಗಾನ ಬಳಗದವರಿಂದ “ಪ್ರಮೀಳಾರ್ಜುನ ಕಾಳಗ” ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!