ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ 5 ರೂ., ಡೀಸೆಲ್’ಗೆ 10 ರೂ. ಕಡಿತ
ನವದೆಹಲಿ: ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ ಸವಾರರು ಸ್ವಲ್ಪ ನಿಟ್ಟೂಸಿರು ಬಿಡುವಂತಾಗಿದೆ.
ಕೇಂದ್ರ ಸರ್ಕಾರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ. ಕಡಿತ ಮಾಡಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ನಿರ್ಧಾರವಾಗುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.