ಐಕಳ ಹರೀಶ್ ಶೆಟ್ಟಿಯವರಿಗೆ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿ.ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ. 7 ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬಂಟರ ಸಂಘದ ಆಶ್ರಯದಲ್ಲಿ ವಿಜಯ ನಗರದಲ್ಲಿರುವ ಶ್ರೀಮತಿ ರಾಧಾ ಭಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ದೀಪಾವಳಿ ಸಡಗರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜೀ ಉಪ ಮುಖ್ಯಮಂತ್ರಿ ಡಾ.ಸಿ.ಎಸ್ ಅಶ್ವಥ್ ನಾರಾಯಣ್, ಸಾಲು ಮರದ ತಿಮ್ಮಕ್ಕ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ದಿ.ಕೆ.ಪಿ ರಾಮಣ್ಣ ಶೆಟ್ಟಿ ಸ್ಮಾರಕ ಶೈಕ್ಷಣಿಕ ಸಾಧಕ ಪ್ರಶಸ್ತಿಯನ್ನು ಡಾ.ಜಯಕರ ಶೆಟ್ಟಿ ಎಂ, ದಿ. ಡಾ. ಡಿ.ಕೆ ಚೌಟ ಸ್ಮಾರಕ ಸಾಂಸ್ಕೃತಿಕ ಸಾಧಕ ಪ್ರಶಸ್ತಿಯನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಪಡೆಯಲಿದ್ದಾರೆ. ವಿಶೇಷ ಗೌರವಾನ್ವಿತರಾಗಿ ಬಿ. ಜಗನ್ನಾಥ ಶೆಟ್ಟಿ, ಐ.ಎಂ ರಾಜಾರಾಮ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.