ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದಿಂದ ಪೌರಕಾರ್ಮಿಕರೊಂದಿಗೆ ದೀಪಾವಳಿ ಆಚರಣೆ

ಉಡುಪಿ ನ.3(ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ಕೆ.ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಉಡುಪಿ ನಗರಸಭೆಯ ಪೌರಕಾರ್ಮಿಕರೊಂದಿಗೆ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ 325 ಕ್ಕಿಂತ ಹೆಚ್ಚು ಪೌರಕಾರ್ಮಿಕರಿಗೆ ಹೊಸ ಬಟ್ಟೆ ಹಾಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಉಡುಪಿ ನಗರಸಭೆಯ ಪೌರಾಯುಕ್ತ ಉದಯಕುಮಾರ, ಆರೋಗ್ಯ ಅಧಿಕಾರಿಗಳಾದ ಕರುಣಾಕರ್ ಹಾಗೂ ಶಶಿರೇಖಾ, ಉಡುಪಿ ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿಯವರು, ಸಮಾಜಸೇವಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಯುವರಾಜ್ ಪುತ್ತೂರು.

ಕೆ.ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಅಧ್ಯಕ್ಷ ಚರಣ್ ರಾಜ್ ಬಂಗೇರ, ಎಸ್.ಎಸ್ ಯು ಐ ನ ಜಿಲ್ಲಾಧ್ಯಕ್ಷ ಸೌರಭ ಬಲ್ಲಾಳ್, ಟೀಮ್ ಸಹಾರಾದ ಅಧ್ಯಕ್ಷ ಪ್ರಥಮ್, ಯಶೋಧ ಆಟೋ ಚಾಲಕರ ಮತ್ತು ಮಾಲಕರ ಸಂಘದ ತಾಲೂಕು ಅಧ್ಯಕ್ಷ ಉದಯ್, ಹರೀಶ ಅಮೀನ್, ಗಣೇಶ್ ಪರ್ಕಳ, ಗಣೇಶ್ ಶೇರಿಗಾರ್, ಪ್ರಣಮ್, ಶೈಲೇಶ್ ಪುತ್ತೂರ್, ಸಜ್ಜನ್ ಶೆಟ್ಟಿ, ರಿಹಾನ್ ಶೇಕ್, ಸಿರಾಜ್ ಶೇಕ್, ರಾಹುಲ್ ಬ್ರಿಗೇಡ್ ನ ಅಧ್ಯಕ್ಷರಾದ ಮೊಹಮ್ಮದ್ ಜಮೀರ್, ಶ್ರೇಯಸ್ ಪುತ್ರನ್ ಉಡುಪಿ ನಗರಸಭೆಯ ಪೌರಕಾರ್ಮಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!