ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಾಪಸ್
ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ನೈಟ್ ಕರ್ಫ್ಯೂ ಆದೇಶವನ್ನು ಶುಕ್ರವಾರ ಹಿಂಪಡೆದಿರುವ ಸರ್ಕಾರ, ಕೋವಿಡ್ ನಿಯಮ ಪಾಲನೆಯೊಂದಿಗೆ ಕುದುರೆ ರೇಸ್ ಗೂ ಅವಕಾಶ ಕಲ್ಪಿಸಿದೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನಾರ್ಹ ರೀತಿಯಲ್ಲಿ ಇಳಿಕೆ ಕಂಡುಬರುವುದರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕುದುರೆ ರೇಸ್ ನಂತಹ ಕಾರ್ಯಕ್ರಮಗಳಲ್ಲಿ ಆಸನದ ಸಾಮರ್ಥ್ಯದಷ್ಟು ಜನರು ಭಾಗವಹಿಸಬೇಕು, ಅಲ್ಲದೇ, ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದಿರುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಏಪ್ರಿಲ್-ಅಂತ್ಯದಿಂದ ಎರಡನೇ ಅಲೆ ಪ್ರಾರಂಭದ ನಂತರ ಎರಡು ತಿಂಗಳು ಲಾಕ್ ಡೌನ್ ಅಂತ್ಯದ ವೇಳೆ ಜುಲೈ 3 ರಿಂದ ನೈಟ್ ಕರ್ಪ್ಯೂ ಆದೇಶವನ್ನು ಜಾರಿಗೊಳಿಸಲಾಗಿತ್ತು.