ಅಡಿಕೆ ಕದ್ದ ಬಾಲಕನಿಗೆ ಹಲ್ಲೆ, ವಿಡಿಯೋ ವೈರಲ್- 10 ಮಂದಿಯ ವಿರುದ್ಧ ದೂರು
ಸುಳ್ಯ ನ.5: ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ 16 ವರ್ಷದ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 10 ಮಂದಿ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ದೂರು ದಾಖಲಾಗಿದೆ.
ಈ ಘಟನೆ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿನಡೆದಿದ್ದು, ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ವಿರುದ್ಧ ದೂರು ದಾಖಲಾಗಿದೆ.
ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದ. ಅಲ್ಲದೆ ಬಾಲಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ. ಇತ್ತ ಎಲ್ಲೆಡೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.