ಪೆಟ್ರೋಲ್, ಡೀಸೆಲ್ 25 ರೂ., ಎಲ್‌ಪಿಜಿಗೆ 500 ರೂ. ಇಳಿಸಿ- ಡಿಕೆಶಿವಕುಮಾರ್
ಹುಬ್ಬಳ್ಳಿ, ನ. 05: ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ನಿಜವಾಗಿಯೂ ಆಸಕ್ತಿ ಇದ್ದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕನಿಷ್ಠ 25 ರೂ.ಗಳಷ್ಟು ಕಡಿಮೆ ಮಾಡಿ ಮತ್ತು ಎಲ್‌ಪಿಜಿ ಸಿಲಿಂಡರ್ ದರವನ್ನು 500 ರೂ.ಗಳಿಗೆ ಇಳಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡೀಸೆಲ್ ಮತ್ತು ಪೆಟ್ರೋಲ್ ಮತ್ತು ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕವನ್ನು ಮತ್ತಷ್ಟು ಕಡಿಮೆ ಮಾಡಬೇಕೆಂಬ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಬೇಡಿಕೆಯನ್ನು ಬೆಂಬಲಿಸಿದರು. ಯುಪಿಎ ಸರಕಾರ ಆಡಳಿತದಲ್ಲಿದ್ದಾಗ ಬಿಜೆಪಿ ನಾಯಕರು ಪೆಟ್ರೋಲ್ ಬೆಲೆ ಲೀಟರ್‌ಗೆ 50 ರೂ.ಗೆ ನೀಡಬೇಕು ಎಂದು ಒತ್ತಾಯಿಸಿದ್ದರು. ಕೇಂದ್ರ ಸರಕಾರವು ಅಬಕಾರಿ ಸುಂಕವಾಗಿ 35 ರಿಂದ 40 ರೂ. ಅಬಕಾರಿ ಸುಂಕವನ್ನು ಮತ್ತಷ್ಟು ಕಡಿತಗೊಳಿಸಬೇಕು ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಮತ್ತು ಇತರ ಪೆಟ್ರೋಲಿಯಂ ಉತ್ಪನ್ನಗಳ ದೇಶೀಯ ಬೆಲೆಗಳನ್ನು ಮತ್ತಷ್ಟು ಕಡಿಮೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಉಪಚುನಾವಣೆಯ ಪರಿಣಾಮದಿಂದಾಗಿ ಸರಕಾರ ತೈಲ ಬೆಲೆ ಇಳಿಕೆ ಮಾಡಿದೆ. ಇದು ಸರ್ಕಾರದ ಸಾಧನೆಯನ್ನು ಸೂಚಿಸುವುದಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಅತ್ಯಂತ ಕಡಿಮೆ ಇದ್ದಾಗಲೂ ಸರ್ಕಾರಗಳು ದೊಡ್ಡ ಮೊತ್ತದ ಹಣವನ್ನು ಸಂಗ್ರಹಿಸಿದ್ದವು. ಅವುಗಳನ್ನು ಇನ್ನಷ್ಟು ಕಡಿಮೆ ಮಾಡಲು ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಅಗತ್ಯ ವಸ್ತುಗಳ ಬೆಲೆಗಳು, ಖಾದ್ಯ ತೈಲ, ಎಲ್‌ಪಿಜಿ, ಉಕ್ಕು, ಸಿಮೆಂಟ್ ಮತ್ತು ಕಬ್ಬಿಣದ ಬೆಲೆಗಳನ್ನು ಕಡಿಮೆ ಮಾಡದಿದ್ದರೆ ಮತ್ತು ಹಣದುಬ್ಬರವನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಇದೇ ರೀತಿಯ ಫಲಿತಾಂಶಗಳು ಕಾದಿವೆ ಎಂದು ಅವರು ಎಚ್ಚರಿಸಿದ್ದಾರೆ.