ಉಡುಪಿ: ಲಾಕ್ ಡೌನ್ ಇಲ್ಲ,14 ದಿನ ಜಿಲ್ಲೆಯ ‘ಗಡಿ ಸೀಲ್ ಡೌನ್’
ಉಡುಪಿ, ಜು14:(ಉಡುಪಿ ಟೈಮ್ಸ್ ವರದಿ) ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಬದಲು 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸೀಲ್ಡೌನ್ ಮಾಡುವ ಕುರಿತು ಮಂಗಳವಾರ ಬೆಳಗ್ಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲೆಯ ಶಾಸಕರ ಹಾಗೂ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಗಡಿಭಾಗದಿಂದ ಹೊರಗೆ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಜು. 15 ರ ಬುಧವಾರ ರಾತ್ರಿ 8:00 ಗಂಟೆಯವರೆಗೆ ಅವಕಾಶ ಕಲ್ಪಿಸಲು ಹಾಗೂ ಬುಧವಾರದಿಂದ ಬಸ್ ಸಹಿತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸರ್ಕಾರದ ಹಿಂದಿನ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ಡೌನ್ ಯಥಾಸ್ಥಿತಿ ಮುಂದುವರೆಯಲಿದೆ. ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಶ್ರೀನಿವಾಸ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿಗಳ ಜಿ ಜಗದೀಶ್, ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರೀತಿ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಆಯುಕ್ತರಾದ ಕೆ. ರಾಜು, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಸುಧೀರ್ ಚಂದ್ರ ಸೂಡ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್, ಜಿಲ್ಲಾ ಸರ್ಜನ್ ಮಧುಸೂದನ್ ಉಪಸ್ಥಿತರಿದ್ದರು. |
Udupi District boarder seal down for 14 days for the prevention of sevier spreading of Covid 19, is a good decision. We hope for the good health and safety of the people. God bless you all and your family.
How does it helps in preventing community transmission within Udupi. No idea. Please explain.
What is the rationale for border closure keeping people inside to roam freely?
One more doubt as I couldn’t contact Dr. Tedros. Please Udupi authorities answer. Is corona virus travels only via roads?
Great decision by our DC & DHO
Great decision by our DC & DHO
Good decision by DC.. thank you