ಉಡುಪಿ: ಕೋವಿಡ್-19 ಗೆ ಜಿಲ್ಲೆಯಲ್ಲಿ ಐದನೇ ಬಲಿ!
ಉಡುಪಿ: ಜಿಲ್ಲೆಯಲ್ಲಿ ಕೊರೋನಾಗೆ ಐದನೇ ಬಲಿಯಾಗಿದೆ. ಕಾಪು ತಾಲೂಕಿನ ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗಾಗಿ ಆಸ್ಪತ್ರೆ ದಾಖಲಾಗಿದ್ದ ವೃದ್ದ ಸಾವನ್ನಪ್ಪಿದ್ದಾರೆ. ಇವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಪಡುಬಿದ್ರಿಯ ಈ ವ್ಯಕ್ತಿಗೆ 82 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಇವರು ಮೃತಪಟ್ಟಿದ್ದು, ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಡಿಎಚ್ ಒ ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿಯಂತೆ ಬೀಡಿನಗುಡ್ಡೆಯಲ್ಲಿ ನಡೆಸಲಾಗಿದೆ. |