ಉಡುಪಿ: ಗ್ರಾಮ ಸಹಾಯಕರಿಗೆ ಕೊರೊನಾ ಪಾಸಿಟಿವ್
ಉಡುಪಿ, ಜು.14: ಉಡುಪಿ ತಾಲೂಕು ಕಚೇರಿಗೆ ಬಂದು ಹೋದ ಗ್ರಾಮ ಸಹಾಯಕರೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಕಚೇರಿಯನ್ನು ಜೂ.15 ಮತ್ತು 16ರಂದು ಮುಚ್ಚಿ, ಸ್ಯಾನಿಟೈಸ್ ಮಾಡಲಾಗುವುದು. ಅವರಿಗೆ
ಹಿರೇಬೆಟ್ಟುವಿನ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರ ಪತ್ನಿಯ ಮೂಲಕ ಬಂದಿರಬಹುದೆಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಅವರು ತಾಲೂಕು ಕಚೇರಿಗೆ ಬಂದು ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಮಿನಿ ವಿಧಾನಸೌಧ ಮತ್ತು ಹಳೆಯ ತಾಲೂಕು ಕಚೇರಿ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು.
ಆದುದರಿಂದ ಜೂ.15 ಮತ್ತು 16ರಂದು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯ ನಿರ್ವಹಿಸುವುದಿಲ್ಲ ಮತ್ತು ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.