ಉಡುಪಿ ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು, ನಾಲ್ಕು ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟಿವ್
ಉಡುಪಿ: ಜಿಲ್ಲಾಸ್ಪತ್ರೆಯ ಇಬ್ಬರು ವೈದ್ಯರು ಮತ್ತು ನಾಲ್ವರು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ಪಾಸಿಟಿವ್ ದೃಢಪಟ್ಟಿದೆ.
ಒಬ್ಬರು ವೈದ್ಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಬ್ಬರು ಮನೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ.
ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಗಳಿಗೆ ಕೂಡ ಕೋವಿಡ್-19 ಸೋಂಕು ಪಾಸಿಟಿವ್ ಪತ್ತೆಯಾಗಿದೆ. ಇವರ ಸಂಪರ್ಕಕ್ಕೆ ಬಂದ ಇತರ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡಲು ಮಾದರಿ ಕಳುಹಿಸಿಕೊಡಲಾಗಿದೆ.
ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ರೋಗಿಗೆ ಕೋವಿಡ್-19 ಸೋಂಕು ಪಾಸಿಟಿವ್ ದೃಢವಾಗಿದ್ದು ಇಲ್ಲಿನ ಸಿಬಂದಿಗಳ ಆತಂಕಕ್ಕೆ ಕಾರಣವಾಗಿದೆ.