ಮಣಿಪಾಲ: ಗಾಂಜಾ ಮಾರಾಟ ಯತ್ನಇಬ್ಬರ ಬಂಧನ
ಮಣಿಪಾಲ: ಉಡುಪಿ ಡಿಸಿಐಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಶೀಂಬ್ರದ ವ್ಯಾಲ್ಯು ವೀವ್ ಕೌಂಟಿ ಕ್ಲಬ್ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಆರೋಪಿಗಳಾದ ದೊಡ್ಡಣಗುಡ್ಡೆ ಮಸೀದಿ ಬಳಿಯ ನಿವಾಸಿ ಅಬ್ದುಲ್ ರೌಫ್ (20) ಮತ್ತು ಕೊಳಲಗಿರಿ ಅಫ್ತಾಬ್ ಆಲಿ (21) ಗಾಂಜಾ ಮಾರಾಟಕ್ಕೆ ಯತ್ನಿಸುವ ಮಾಹಿತಿ ಪಡೆದ ಡಿಸಿಐಬಿ ಇನ್‌ಸ್ಪೇಕ್ಟರ್ ಮಂಜಪ್ಪ ನೇತ್ರತ್ವದಲ್ಲಿ ದಾಳಿ ಮಾಡಿ ಬಂಧಿಸಲಾಗಿದೆ.
ಬಂಧಿತರಿಂದ 1.140 ಕೆಜಿ ಗಾಂಜಾ, 2 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ಸುಮಾರು 1.45 ಲಕ್ಷ ರೂಪಾಯಿ ಆಗಬಹುದು.
ಈ ಕಾರ್ಯಾಚರಣೆಯಲ್ಲಿ ಡಿ.ಸಿ.ಐ.ಬಿ ಘಟಕದ ಎಎಸ್‌ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ್, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಅವರು ಸಹಕರಿಸುತ್ತಾರೆ.