ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ: ಆರೋಪಗಳು ಸತ್ಯಕ್ಕೆ ದೂರವಾದವು: ಶ್ರೀರಾಮುಲು
ಬೆಂಗಳೂರು: ಕೊರೋನಾ ಸೋಂಕಿನಿಂದ ರಾಜ್ಯವನ್ನು ರಕ್ಷಿಸಲು ಆ ಭಗವಂತನಿಂದ ಮಾತ್ರ ಸಾಧ್ಯ ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಚಿವ ಶ್ರೀರಾಮಲು ಅವರು ಗುರುವಾರ ಸ್ಪಷ್ಟೀಕರಣ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟ್ವೀಟರ್ ನಲ್ಲಿ ಸ್ಪಷ್ಟೀಕರಣ ನೀಡಿರುವ ಆರೋಗ್ಯ ಸಚಿವ ಶ್ರೀರಾಮುಲು, ನಮ್ಮ ಸರ್ಕಾರ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಹಗಲಿರುಳೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದ್ದು, ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತಿದ್ದೆನೆಂದು ಹೇಳಿಕೊಂಡಿದ್ದಾರೆ.
ತಮ್ಮ ಮೇಲಿನ ಆರೋಪಗಳು ‘ಸತ್ಯಕ್ಕೆ ದೂರವಾದದ್ದು,’ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು. ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇದರಲ್ಲಿ ನಾವು ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳಾಗಿವೆ ಹೊರತು ವಿಫಲರಾಗಿದ್ದೇವೆ ಎಂಬ ಅರ್ಥದಲ್ಲಿ ಅಲ್ಲ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿ ಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಭಾವನಾತ್ಮಕವಾಗಿ ಹೇಳಿಕೆ ನೀಡಿದ್ದೇನೆ. ತಮ್ಮ ಮಾತಿಗೆ ಈಗಲೂ ಬದ್ದರಾಗಿದ್ದು ತಪ್ಪಾಗಿ ತಿಳಿಯಬೇಡಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಸರಿಯಾಗಿ ಹೇಳಿದ್ದಾರೆ.ಜನಗಳಿಗೆ ತಮ್ಮ ಬಗ್ಗೆ ಜಾಗ್ರತೆ ಇಲ್ಲದಿದ್ದರೆ ಖಂಡಿತ ದೇವ್ರೇ ಕಾಪಾಡ್ಬೇಕು.ರಾಜಕೀಯ ಮಾಡೋದು ಬಿಟ್ಟು ಸರ್ಕಾರಕ್ಕೆ ಬೆನ್ನೆಲುಬಾಗಿ ನಿಲ್ಲಿ.ಜನ ಒಪ್ಕೋತಾರೆ.ಸಲಹೆ,ಸೂಚನೆ ,ನಿಮ್ಮಿಂದಾದ ಸಹಾಯ ಮಾಡಿ.