| ಹೊಸದಿಲ್ಲಿ ನ.30: ಇದುವರೆಗೆ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನ್ನು ರಾಷ್ಟ್ರೀಯ ಮಟ್ಟದಲ್ಲಿ ಸಿದ್ಧಪಡಿಸಲು ಸರಕಾರ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ಕೇಂದ್ರ ಸರಕಾರ ಇಂದು ಲೋಕಸಭೆಗೆ ತಿಳಿಸಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಲೋಕಸಭೆ ಸಂಸದ ಹೈಬಿ ಈಡನ್ ಅವರಿಗೆ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ತಿಳಿಸಿದರು. ಈ ವಿಚಾರವಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಅನುಷ್ಠಾನವನ್ನು ಸರಕಾರ ಪರಿಗಣಿಸುತ್ತಿದೆಯೇ ಎಂದು ಈಡನ್ ಕೇಳಿದ್ದರು. ಪೌರತ್ವ (ತಿದ್ದುಪಡಿ) ಕಾಯಿದೆ, 2019 (ಸಿಎಎ) ಅನ್ನು ಡಿಸೆಂಬರ್ 12, 2019 ರಂದು ಅಧಿಸೂಚನೆ ನೀಡಲಾಗಿದ್ದು ಮತ್ತು ಜನವರಿ 10, 2020 ರಂದು ಜಾರಿಗೆ ಬಂದಿದೆ ಹಾಗೂ ನಿಯಮಗಳನ್ನು ಸೂಚಿಸಿದ ನಂತರ ಸಿಎಎ ವ್ಯಾಪ್ತಿಗೆ ಒಳಪಡುವ ಜನರು ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ. | |