ಉಡುಪಿ: ಅಕ್ರಮ ದಂಧೆಗೆ ಕಡಿವಾಣ ಹಾಕಲು ಕುಯಿಲಾಡಿ ಆಗ್ರಹ
ಉಡುಪಿ (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಇಸ್ಪೀಟ್ ದಂಧೆ, ಮಸಾಜ್ ಪಾರ್ಲರ್ ಹಾಗೂ ನಿರಂತರವಾಗಿ ನಡೆಯುತ್ತಿರುವ ಮಟ್ಕಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಬೇಕೆಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ರಾಜಾರೋಷವಾಗಿ ಅಕ್ರಮ ಇಸ್ಪೀಟ್ ದಂಧೆ, ಮಟ್ಕಾ, ಮಸಾಜ್ ದಂಧೆ ನಡೆಯುತ್ತಿದ್ದು ಇದನ್ನು ಉಡುಪಿ ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ಅತಿ ಶೀಘ್ರವಾಗಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಡಿವಾಣ ಹಾಕಬೇಕುoದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.