ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ

ಬೆಂಗಳೂರು: ಮೇ 24ರ ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಇರಲಿದೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಶನಿವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ’ ಎಂದು ರಾಜ್ಯ ಸರ್ಕಾರ ಹೇಳಿದೆ. 


ಲಾಕ್‌ಡೌನ್ ಸಡಿಲ ಮಾಡಲಾಗುತ್ತಿದ್ದರೂ  ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾನುವಾರ ನಿರ್ಬಂಧ ಮುಂದುವರಿಯಲಿದೆ ಎಂದು ಸರ್ಕಾರ ಹೇಳಿತ್ತು.

‘ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳ ಸಂಖ್ಯೆ ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್‌ ತಿಳಿಸಿದರು. 

‘ಮದುವೆ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಔಷಧ ಅಂಗಡಿಗಳು, ಆಸ್ಪತ್ರೆ ತೆರೆದಿರಲಿವೆ. ಹಾಲು, ತರಕಾರಿ ಮಾರಾಟದಂತಹ ಅಗತ್ಯ ಸೇವೆ ಒದಗಿಸುವ ಚಟುವಟಿಕೆ ನಡೆಯಲಿದೆ’ ಎಂದು ಅವರು ಹೇಳಿದರು.  ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳಿಗೆ ತೆರೆಯಲು ಅವಕಾಶ

ಏನಿದೆ?
* ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳಿಗೆ ಅವಕಾಶ
* ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳು ಓಡಾಟಕ್ಕೆ ಅವಕಾಶ
* ಡಯಾಲಿಸಿಸ್, ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
* ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
* ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ

ಏನಿರಲ್ಲ?
* ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
* ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ನಗರದ ಪ್ರಮುಖ ರಸ್ತೆಗಳು ಬ್ಯಾರಿಕೆಡ್‍ನಿಂದ ಕ್ಲೋಸ್
* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ಬಂದ್.
* ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ ಬೀಳಲಿದ್ದು, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.
* ಚಿನ್ನದ ಅಂಗಡಿಗಳು ಕೂಡ ಕ್ಲೋಸ್ ಆಗಲಿವೆ
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ
ರಾಜ್ಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಜನರು ಮನೆಯಿಂದ ಹೊರಬಾರದಂತೆ ಸರ್ಕಾರ ಎಚ್ಚರಿಕೆ ನೀಡಿದೆ.


2 thoughts on “ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ

  1. Good luck. Saturday 23rd 7pm, to Sunday 24th May full day & night till 7am Monday 25th May, lock down and curfew should be strictly followed by the people. If any mischievous activities observed should be punished with out hesitation. During this serious situation of Covid 19, spreading day by day.

Leave a Reply

Your email address will not be published. Required fields are marked *

error: Content is protected !!