ಮೋದಿ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಟ್ಯೂಷನ್ ಅಗತ್ಯವಿದೆ- ರಾಹುಲ್ ಗಾಂಧಿ

ನವದೆಹಲಿ: ಮೋದಿ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಟ್ಯೂಷನ್ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

12 ಮಂದಿ ರಾಜ್ಯಸಭಾ ಸಂಸದರ ಅಮಾನತು ವಿರುದ್ಧದ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ವಿಚಾರವಾಗಿ ಟ್ಟೀಟ್ ಮೂಲಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಪ್ರಜಾಪ್ರಭುತ್ವದಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯದ ಮಹತ್ವದ ಕುರಿತು ಮೋದಿ ಸರ್ಕಾರಕ್ಕೆ ಟ್ಯೂಷನ್ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 29 ರಂದು ಹನ್ನೆರಡು ಪ್ರತಿಪಕ್ಷದ ರಾಜ್ಯಸಭಾ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಭಾಗಗಳಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!