ಉಡುಪಿ: ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾನುವಾರವೂ ಕೂಡ 134 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಇದುವರೆಗೂ 1628 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 584ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ.
ಭಾನುವಾರ 455 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. 509 ವರದಿಗಳು ಬರುವುದು ಬಾಕಿ ಇದೆ.
ಮಹಾಮಾರಿ ಕೊರೋನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 4,120 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 91 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,331ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 36 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 91 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು
ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2156 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4120 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 63,772ಕ್ಕೇರಿಕೆಯಾಗಿದೆ