ಉಡುಪಿ: ಪುತ್ತಿಗೆ ಶ್ರೀಗಳಿಗೆ ಕೊರೊನಾ ಪಾಸಿಟಿವ್ ದೃಢ!

ಉಡುಪಿ: ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೊನಾ ಸೋಂಕು ದೃಢ ವಾಗಿದೆ. ಸ್ವಾಮೀಜಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.  

ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆ ಮಠವನ್ನು ಸೀಲ್ ಡೌನ್ ಮಾಡಲಾಗಿದೆ.
ಕೊರೋನಾ ಸಂದರ್ಭದಲ್ಲಿಯೂ ಅನೇಕ ಭಕ್ತರು ಮಠಕ್ಕೆ ಆಗಮಿಸಿ, ಸ್ವಾಮೀಜಿಯಿಂದ ಆಶೀರ್ವಾದ ಪಡೆದುಕೊಂಡಿದ್ದರು. ಇದರಿಂದಾಗಿ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.

ಇನ್ನೂ ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರು ಪ್ರಾರ್ಥನೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!