ಸ್ಥಳೀಯ ಸಂಸ್ಥೆ ಚುನಾವಣೆ: ಅತೀ ಹೆಚ್ಚು ಸ್ಥಾನ ಪಡೆದ ಕಾಂಗ್ರೆಸ್, 2ನೇ ಸ್ಥಾನಕ್ಕೆ ತಳ್ಳಲ್ಪಟ್ಟ ಬಿಜೆಪಿ

ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಗಮನಾರ್ಹ ಸಾಧನೆ ಮಾಡಿದೆ.

ಪಟ್ಟಣ ಪಂಚಾಯಿತಿಯ ಒಟ್ಟು 577 ಸ್ಥಾನಗಳ ಪೈಕಿ ಕಾಂಗ್ರೆಸ್ 236 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಜೆಡಿಎಸ್ ಪಕ್ಷ 12 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.

ಪುರಸಭೆಯ ಒಟ್ಟು 441 ಸ್ಥಾನಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 176 ಸ್ಥಾನಗಳಲ್ಲಿ ಜಯಗಳಿಸಿದ್ದರೆ ಜೆಡಿಎಸ್ 43 ಸ್ಥಾನಗಳನ್ನು ಗಳಿಸಿಕೊಂಡಿದೆ.

ನಗರಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಒಟ್ಟು 166 ಸ್ಥಾನಗಳ ಪೈಕಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ 12 ಮತ್ತು ಇತರರು 26 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. 

ನಮಗೆ ಶೇ 48 ಮತ ಬಂದಿದ್ದರೆ, ಬಿಜೆಪಿಗೆ ಶೇ 41 ಬಂದಿತ್ತು. 1,187 ಸ್ಥಾನಗಳಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷ 500ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 430, ಜೆಡಿಎಸ್ 45, ಇತರೆ 207 ಸ್ಥಾನಗಳನ್ನು ಗೆದ್ದಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಜನ ಭಾವಿಸಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!