ಉಡುಪಿ: ನಿಲ್ಲದ ಕೊರೋನಾ ಆರ್ಭಟ, 281 ಮಂದಿಗೆ ಪಾಸಿಟಿವ್ ದೃಢ
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಬುಧವಾರ ಕೂಡ ಮುಂದುವರಿದಿದೆ, ಒಟ್ಟು 281 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಜುಲೈ 22 ವರೆಗೆ 1765 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 910 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 15 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,050 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 4,764 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 75,833ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು ಬೆಂಗಳೂರಿನಲ್ಲಿ 812 ಜನ ಚೇತರಿಕೆ ಸೇರಿ ರಾಜ್ಯದಲ್ಲಿ 1780 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ. ಒಟ್ಟು 75,833 ಸೋಂಕಿತರ ಪೈಕಿ 27,239 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 47,096 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಂದೇ ದಿನದಲ್ಲಿ 48,140 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 11,12,874 ಟೆಸ್ಟ್ ನಡೆಸಲಾಗಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ