| ಉಡುಪಿ: ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಧರಿಸಿದ ಕಾರಣಕ್ಕಾಗಿ ತರಗತಿಗೆ ಪ್ರವೇಶ ನಿರಾಕರಣೆ ಮಾಡಿರುವ ಪ್ರಾಂಶುಪಾಲರ ಕ್ರಮವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಖಂಡಿಸುತ್ತದೆ.
ಓರ್ವ ಮುಸ್ಲಿಂ ಹೆಣ್ಣಿಗೆ ಸ್ಕಾರ್ಫ್ ಧರಿಸುವುದು ಧಾರ್ಮಿಕ ನಂಬಿಕೆಯ ಭಾಗವಾಗಿದೆ ಮತ್ತು ನಮ್ರತೆಯ ಚಿಹ್ನೆಯಾಗಿದೆ ಅದೇ ರೀತಿ ಸಂವಿಧಾನದ 25ನೇ ವಿಧಿಯಂತೆ ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಅಭ್ಯಸಿಸುವ, ಆಚರಿಸುವ ಮೂಲಭೂತ ಹಕ್ಕಿನ ಭಾಗವಾಗಿದೆ.
ಈ ಕುರಿತು ಕಾಲೇಜು ಪ್ರಾಂಶುಪಾಲರು ಫ್ಯಾಶಿಸ್ಟ್ ಧೋರಣೆಯನ್ನು ಅನುಸರಿಸಿ, ವಿಧ್ಯಾರ್ಥಿನಿಗಳಿಗೆ ಕಿರುಕುಳ ನೀಡುತಿದ್ದು ಈ ಕುರಿತು ಕಾಲೇಜಿನ ಪ್ರಾಂಶುಪಾಲರಲ್ಲಿ ವಿದ್ಯಾರ್ಥಿನಿಯರ ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಹಲವು ಭಾರಿ ಮಾತನಾಡಿದ್ದರು ಸಹ ಅವರಿಗೆ ಯಾವುದೇ ಮನ್ನಣೆ ಸಿಗಲಿಲ್ಲ ಹಾಗೂ ಕಳೆದ 4 ದಿನಗಳಿಂದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಹಾಕಲಾಗುವ ಮೂಲಕ ಅವರ ಕಲಿಕೆಗೆ ತೊಡಕುಂಟು ಮಾಡಲಾಗಿದೆ.
ಆದ್ದರಿಂದ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟವರು ಪ್ರಾಂಶುಪಾಲರ ಈ ತಾರತಮ್ಯ ನೀತಿಯನ್ನು ಗಂಭೀರವಾಗಿ ಪರಿಗಣಿಸಿ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿನಿಯರಿಗೆ ತರಗತಿಗೆ ಹಾಜರಾಗಲು ಅನುವು ಮಾಡಿಕೊಡಬೇಕು,ಇಲ್ಲವೇ ತೀವ್ರ ಹೋರಾಟ ಮಾಡಬೇಕಾದೀತು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹಮದ್ ರವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸುತ್ತಿದ್ದಾರೆ. | |