ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ಶೀಘ್ರ ನೇಮಕಕ್ಕೆ ಟ್ವಿಟ್ಟರ್ ಅಭಿಯಾನ

ಉಡುಪಿ, ಜ.1(ಉಡುಪಿ ಟೈಮ್ಸ್ ವರದಿ): ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಅರ್ಹರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ #NRIappealDay ಟ್ವಿಟ್ಟರ್ ಅಭಿಯಾನದಲ್ಲಿ ಭಾಗವಹಿಸಲು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಮನವಿ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಫೆಡರೇಶನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರು ಅನಿವಾಸಿ ಕನ್ನಡಿಗರಿಗೆ ರಾಜ್ಯ ಸರ್ಕಾರದ ಅಧಿಕೃತ ಪ್ರತಿನಿಧಿ. ಆದರೆ ಈ ಸ್ಥಾನ 3ವರ್ಷಗಳಿಂದ ಖಾಲಿ ಇದ್ದು, ತಕ್ಷಣವೇ ನೇಮಕ ಮಾಡಬೇಕು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಿವಾಸಿ ಕನ್ನಡಿಗರಿಗೆ ಅಧಿಕಾರಿಗಳಿಂದ ಆಗುತ್ತಿರುವ ವಿನಾಕಾರಣದ ನಿರಂತರ ಕಿರುಕುಳಗಳನ್ನು ಕೊನೆಗೊಳಿಸಲು ಸಂಬಂಧಪಟ್ಟ ಇಲಾಖೆಯ ಗಮನಸೆಳೆದು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಈ ಅಭಿಯಾನದ ಕೈಗೊಳ್ಳಲಾಗಿದೆ.

ಈ ನಿಟ್ಟಿನಲ್ಲಿ ಜನವರಿ 2ರಂದು ಸಂಜೆ 3ಗಂಟೆಗೆ ಸರಿಯಾಗಿ ನೂರಾರು ಕನ್ನಡಪರ ಸಂಘಟನೆಗಳು ಟ್ವಿಟ್ಟರ್ ಅಭಿಯಾನದ ಮೂಲಕ ಧ್ವನಿ ಎತ್ತಲಿದ್ದು ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  #NRIappealDay ಹ್ಯಾಷ್ ಟ್ಯಾಗ್ ಉಪಯೋಗಿಸಿ ಟ್ವೀಟ್ ಮಾಡಿ ಅನಿವಾಸಿಗಳಿಗೆ ಧ್ವನಿಯಾಗಬೇಕು‌ ಎಂದು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಮನವಿ ಮಾಡಿದೆ.


ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ +971 55 111 8555,  +971 56 867 7013 ಸಂಖ್ಯೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!