ಆಸ್ತಿ ನೋಂದಣಿ ಮಾರ್ಗಸೂಚಿ ದರ ಕಡಿತ, ಶೇ 10 ರಷ್ಟು ರಿಯಾಯತಿ: ಸಚಿವ ‌ಆರ್.ಅಶೋಕ್

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಜನರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಆಸ್ತಿ ನೋಂದಣಿಗೆ ಕಂದಾಯ ಇಲಾಖೆ ವಿಶೇಷ ರಿಯಾಯತಿ ಪ್ರಕಟಿಸಿದೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಹೊಸ ವರ್ಷದ ಮೊದಲ ದಿನವೇ ಸರ್ಕಾರ ಈ ರಿಯಾಯಿತಿಯನ್ನು ಜನರ ಅನುಕೂಲಕ್ಕಾಗಿ ನೀಡುತ್ತಿದೆ. ಇಂದಿನಿಂದಲೇ ಈ ಸೌಲಭ್ಯವನ್ನು ಜನರು ಪಡೆದುಕೊಳ್ಳ ಬಹುದು. ಇದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ಸ್ವಲ್ಪ ಆದಾಯ ಕಡಿಮೆ ಆಗಬಹುದು. ಆದರೆ ಲಕ್ಷಾಂತರ ಜನರಿಗೆ ಇದು ಅನುಕೂಲವಾಗುತ್ತದೆ ಎಂದರು.

ಅಗ್ರಿಮೆಂಟ್, ಜಿಪಿಎ ಮಾಡಿಕೊಂಡಿದ್ದ ರೈತರು ಈಗ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನಗಳು, ಕಟ್ಟಡಗಳು, ಅಪಾರ್ಟ್‌ಮೆಂಟ್ ಹಾಗೂ ಇತರ ಎಲ್ಲ ರೀತಿಯ ಸ್ಥಿರಾಸ್ತಿಗಳ ನೋಂದಣಿ ಮಾರ್ಗಸೂಚಿ ದರವನ್ನು ಶೇ. 10 ರಷ್ಟು ಕಡಿತಗೊಳಿಸಲಾಗಿದೆ. ಈ ರಿಯಾಯಿತಿ ಜ.1ರಿಂದ ಮಾರ್ಚ್ ಅಂತ್ಯದವರೆಗೆ ಮಾತ್ರ ಲಭ್ಯ ಇರುತ್ತದೆ ಎಂದು ಅಶೋಕ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!