1,800 ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ನೀಡಿದ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ರಾಜ್ಯಕ್ಕೇ ಮಾದರಿ- ಡಾ.ಕಿರಣ್

ಉಡುಪಿ ಜ.2: ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ರೋಟರಿ ಕ್ಲಬ್ ಉಡುಪಿ- ಮಣಿಪಾಲ, ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ- ಕರಾವಳಿ ಮತ್ತು ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ ಸಹಭಾಗಿತ್ವದಲ್ಲಿ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಆಯೋಜನೆಗೊಂಡಿರುವ  29ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರ ಉದ್ಘಾಟನೆಗೊಂಡಿತು.

ಶಿಬಿರಗಳನ್ನು ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಕಿರಣ್ ಕುಮಾರ್ ಪಿ.ಕೆ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾರಣ, ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುವುದು ಸುಲಭದ ಮಾತಲ್ಲ. ಹೀಗಿರುವಾಗ 29ನೇ ಮದ್ಯವ್ಯಸನ ವಿಮುಕ್ತಿ ಶಿಬಿರ ನಡೆಸುವ ಮೂಲಕ, 1,800ಕ್ಕೂ ಅಧಿಕ ಮದ್ಯ ವ್ಯಸನಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಇಡೀ ರಾಜ್ಯಕ್ಕೇ ಈ ಆಸ್ಪತ್ರೆ ಮಾದರಿ ಎಂದರು. ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ, ಖ್ಯಾತ ಮನೋವೈದ್ಯ ಡಾ. ಪಿ. ವಿ. ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಣಿಪಾಲ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಎಂ., ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಅಧ್ಯಕ್ಷ ಡಾ. ಕಲ್ಯ ವಿನಾಯಕ ಶೆಣೈ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಹೇಮಂತ್, ಮನೋವೈದ್ಯ ವಿರೂಪಾಕ್ಷ ದೇವರಮನೆ, ಆಪ್ತ ಸಮಾಲೋಚಕ ಗಿರೀಶ್ ಎಂ.ಎನ್. ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!