ಮಣಿಪಾಲ ಎಂಐಟಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ -ಕಂಟೈನ್‌ಮೆOಟ್ ಝೋನ್ ಘೋಷಿಸಿ-ಸುನಿಲ್ ಕುಮಾರ್ ಸೂಚನೆ
ಉಡುಪಿ, ಜ.2: ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾತ್ತಿದ್ದು, ಈ ಸಂಖ್ಯೆಯು ಮಣಿಪಾಲ ಎಂ.ಐ.ಟಿ. ಪರಿಸರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದರ ಜೊತೆಗೆ ಕಂಟೈನ್‌ಮೆOಟ್ ಝೋನ್ ಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.
14 ವರ್ಷ ಮೆಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಬೇಕು, ಲಸಿಕೆ ನೀಡಿದ
ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು, ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರುವಂತೆ
ನೋಡಿಕೊಳ್ಳಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್ ಗಳು ನಿಗಾ ವಹಿಸಬೇಕು ಎಂದರು.