ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಕ್ರಿಯ ಪ್ರಕರಣ 220 ಕ್ಕೆ ಏರಿಕೆ

ಉಡುಪಿ,ಜ.3(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ನಿಧಾನವಾಗಿ ಏರಿಕೆಯಾಗುತ್ತಾ ಇದೆ.   

ಇಂದು ಜಿಲ್ಲೆಯಲ್ಲಿ 43 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 41, ಕುಂದಾಪುರ ಹಾಗೂ ಕಾರ್ಕಳದಲ್ಲಿ ತಲಾ ಒಂದೊಂದು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 220 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದೆ. ಜ.2 ರಂದು ಜಿಲ್ಲೆಯಲ್ಲಿ 9 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ  ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!