ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ನೈಟ್‌ ಕರ್ಫ್ಯೂ ಯಾವುದೇ ಪ್ರಯೋಜನ ಇಲ್ಲ- ಕೆ. ರಘುಪತಿ ಭಟ್

ಉಡುಪಿ, ಜ.3: ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಶಾಸಕ ಕೆ. ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಕೋವಿಡ್‌ಗೆ ನಾವೆಲ್ಲ ಹೆದರಬೇಕಾಗಿಲ್ಲ. ಮಾರ್ಚ್ ಎಪ್ರಿಲ್‌ ವರೆಗೆ ಮಾತ್ರ ಕೋವಿಡ್ ಪ್ರಭಾವ ಇರುತ್ತದೆ. ಒಂದು ಮಟ್ಟಕ್ಕೆ ತಲುಪಿದ ನಂತರ ಅದರ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್‌ಡೌನ್‌ನಿಂದ ಒಮ್ಮೇಗೆ ಕೊರೋನ ಸಂಖ್ಯೆ ಏರಿಕೆಯಾಗುವುದನ್ನು ಕಡಿಮೆ ಮಾಡುತ್ತದೆ. ಆದರೆ ಲಾಕ್‌ಡೌನ್ ಮಾಡುವುದು ಬೇಡ ಹಾಗೂ ಆ ಬಗ್ಗೆ ನಮಗೆ ಯಾರಿಗೂ ಒಲವು ಇಲ್ಲ. ಲಾಕ್‌ಡೌನ್, ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಕೂಡ ಇಲ್ಲ ಎಂದು  ಹೇಳಿದರು.

 ನೈಟ್ ಕರ್ಫ್ಯೂ ಈಗ ಅವಶ್ಯಕತೆ ಇಲ್ಲ ಎಂದ ಅವರು, ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ. ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್‌ ಡೌನ್ ಮಾಡಲಿಕ್ಕೆ ಇಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ಲಾಕ್‌ ಡೌನ್ ಮಾಡುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ವೇಳೆ ಉಡುಪಿ ಪರ್ಯಾಯ ಕುರಿತು ಮಾತನಾಡಿದ ಅವರು, ಎರಡು ಡೋಸ್ ಪಡೆದ ಪ್ರಮಾಣ ಪತ್ರ ಇರುವವರು ಮಾತ್ರ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಇದನ್ನು ಆಮಂತ್ರಣ ಪತ್ರಿಕೆಯಲ್ಲಿಯೇ ನಮೂದಿಸಲಾಗಿದೆ. ಸರಕಾರದ ನಿರ್ದೇಶನದ ಪ್ರಕಾರವೇ ಪರ್ಯಾಯ ಮಹೋತ್ಸವವನ್ನು ನಡೆಸಲಾಗುವುದು. ಈ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.

1 thought on “ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ನೈಟ್‌ ಕರ್ಫ್ಯೂ ಯಾವುದೇ ಪ್ರಯೋಜನ ಇಲ್ಲ- ಕೆ. ರಘುಪತಿ ಭಟ್

  1. ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ನೈಟ್‌ ಕರ್ಫ್ಯೂ ಯಾವುದೇ ಪ್ರಯೋಜನ ಇಲ್ಲ
    ಇದ್ದಕೆ ಹಲಸಿನ ಹಣ್ಣು ತಿನ್ನಬೇಕು ಏಡ್ಸ್ ಹೇಗೂ ಬರುದಿಲ್ಲ ಒಮಿಕ್ರಾನ್ ಒಡ್ಡುತ ನೋಡ್ಬೇಕು ಮಾನ್ಯ ರಘುಪತಿ ಭಟ್ ರವರೆ

Leave a Reply

Your email address will not be published. Required fields are marked *

error: Content is protected !!