| ಉಡುಪಿ ಜ.4(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಹೆಚ್ಚಾಗುತ್ತಾ ಇರುವುದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ.
ಇಂದು ಜಿಲ್ಲೆಯಲ್ಲಿ 72 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲೇ 66 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಕುಂದಾಪುರದಲ್ಲಿ 2, ಕಾರ್ಕಳದಲ್ಲಿ 3 ಹಾಗೂ ಹೊರ ಜಿಲ್ಲೆಯ ಓರ್ವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 282 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದೆ. ಜ.3 ರಂದು ಜಿಲ್ಲೆಯಲ್ಲಿ 10 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.
| |