ಉಡುಪಿ: 92 ಮಂದಿಯಲ್ಲಿ ಕೋವಿಡ್ ಸೋಂಕು ದೃಢ- ಸಕ್ರಿಯ ಪ್ರಕರಣ 427ಕ್ಕೆ ಏರಿಕೆ
ಉಡುಪಿ ಜ.6 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಇಂದು ಜಿಲ್ಲೆಯಲ್ಲಿ ಒಟ್ಟು 92 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲೇ 74, ಕುಂದಾಪುರದಲ್ಲಿ 5, ಕಾರ್ಕಳದಲ್ಲಿ 13 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 427ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದೆ. ಜ.5ರಂದು ಜಿಲ್ಲೆಯಲ್ಲಿ 17 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.