ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರಿ ಶಾಕ್!

ಲಖನೌ: ಉತ್ತರ ಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಮಧ್ಯೆ ಉತ್ತರ ಪ್ರದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಯೋಗಿ ನೇತೃತ್ವದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.

ಉತ್ತರ ಪ್ರೇದಶದ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಂಪುಟ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಲ್ಕು ಇಲಾಖೆಗಳ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಸ್ವಾಮಿ ಪ್ರಸಾದ್, ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

ಟಿಕೆಟ್ ಹಂಚಿಕೆ ಕುರಿತಂತೆ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಬಿಜೆಪಿ ಮಧ್ಯೆ ವಿವಾದ ಇತ್ತು ಎನ್ನಲಾಗುತ್ತಿದೆ. ಅಲ್ಲದೆ, ಸಮಾಜವಾದಿ ಪಾರ್ಟಿಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸ್ವಾಮಿ ಪ್ರಸಾದ್ ಮೌರ್ಯ ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ಸಚಿವ ಸ್ವಾಮಿ ಪ್ರಸಾದ್, ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದು ಅದರಲ್ಲಿ, “ಗೌರವಾನ್ವಿತ ರಾಜ್ಯಪಾಲರೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಕಾರ್ಮಿಕ ಮತ್ತು ಉದ್ಯೋಗ ಮತ್ತು ಸಮನ್ವಯ ಮಂತ್ರಿಯಾಗಿದ್ದೆ. ಪ್ರತಿಕೂಲ ಮತ್ತು ಸಿದ್ಧಾಂತದಲ್ಲಿ ಬದುಕಿದ್ದರೂ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದೇನೆ. ಆದರೆ ದಲಿತರು, ಹಿಂದುಳಿದ ರೈತರು, ನಿರುದ್ಯೋಗಿ ಯುವಕರು ಮತ್ತು ಸಣ್ಣ-ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ನಾನು ಉತ್ತರ ಪ್ರದೇಶದ ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ.” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!