ಮಣಿಪಾಲ: ಆಸ್ಪತ್ರೆಯಲ್ಲಿ ಕೊರೋನ ಸೋಂಕಿತ ವ್ಯಕ್ತಿ ಮೃತ್ಯು

ಉಡುಪಿ, ಜು.25: ಶಿವಮೊಗ್ಗ ಜಿಲ್ಲೆ ಕೊರೋನ ಸೋಂಕಿತ 75 ವರ್ಷದ ವ್ಯಕ್ತಿಯೊಬ್ಬರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.


ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಗೆ ಸಂಬಂಧಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ 75 ವರ್ಷ ಪ್ರಾಯದ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.


ಮೃತರ ಅಂತ್ಯಕ್ರಿಯೆಯನ್ನು ಉಡುಪಿ ನಗರ ಖಬರಸ್ಥಾನದಲ್ಲಿ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!