ಕರ್ನಾಟಕ, ಕೇರಳದಲ್ಲಿ ಐಸಿಸ್ ಉಗ್ರರಿದ್ದಾರೆ: ವಿಶ್ವಸಂಸ್ಥೆ
ವಿಶ್ವಸಂಸ್ಥೆ: ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಐಸಿಸ್ ಭಯೋತ್ಪಾದಕರಿದ್ದಾರೆ ಎಂದು ಬೆಚ್ಚಿಬೀಳಿಸುವ ವರದಿಯೊಂದನ್ನು ವಿಶ್ವಸಂಸ್ಥೆ ನೀಡಿದೆ.
ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಮ್ಯಾನ್ಮಾರ್ ದೇಶಗಳಲ್ಲಿ ನೆಲೆಗಳನ್ನು ಕಲ್ಪಿಸಿಕೊಂಡಿರುವ ಸುಮಾರು 150ರಿಂದ 200 ಅಲ್ ಖೈದಾ, ಐಸಿಸ್ ಭಯೋತ್ಪಾದಕರು ದಾಳಿ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ವಿಶ್ವಸಂಸ್ಥೆಯ 26ನೇ ಅನಾಲಿಟಿಕಲ್ ಸಪೋರ್ಟ್ ಅಂಡ್ ಸ್ಯಾಂಕ್ಷನ್ಸ್ ಮಾನಿಟರಿಂಗ್ ತಂಡದ ವರದಿಯಲ್ಲಿ ಐಸಿಸ್, ಅಲ್ ಖೈದಾ ಮತ್ತು ಅದರ ಸಹಚರ ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿದೆ. ಭಾರತದ ಅಲ್ಲಲ್ಲಿ ಅಲ್ ಖೈದಾ ಆಫ್ಘಾನಿಸ್ತಾನದ ನಿಮ್ರುಝ್, ಹೆಲ್ಮಾಂಡ್ ಮತ್ತು ಕಂದಹಾರ್ ಪ್ರಾಂತ್ಯಗಳಿಂದ ತಾನಿಬಾನ್ ಕೈಕೆಳಗೆ ಕೆಲಸ ಮಾಡುತ್ತಿದೆ ಎಂದು ಹೇಳಿದೆ.
ಭಾರತದಲ್ಲಿನ ಅಲ್ ಖೈದಾ ಗುಂಪಿನ ನಾಯಕ ಒಸಮಾ ಮಹಮ್ಮೂದ್ ಆಗಿದ್ದು ಈತ ಮಾಜಿ ನಾಯಕ ಆಸಿಮ್ ಉಮರ್ ಬಳಿಕ ತಂಡದ ನಾಯಕತ್ವ ವಹಿಸಿಕೊಂಡಿದ್ದಾನೆ. ಮಾಜಿ ನಾಯಕನ ಸಾವಿಗೆ ಪ್ರತೀಕಾರ ತೆಗೆದುಕೊಳ್ಳಲು ಈತ ಹೊಂಚು ಹಾಕುತ್ತಿದ್ದಾನೆ ಎಂದು ಹೇಳಲಾಗುತ್ತಿದೆ.