ಉಡುಪಿ: 36 ಗಂಟೆಗಳ ಲಾಕ್‌ಡೌನ್, ಅನಗತ್ಯ ಹೊರ ಬರುವವರಿಗೆ ಲಾಠಿ ರುಚಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ 23 ಶನಿವಾರ ರಾತ್ರಿ 7 ಗಂಟೆಯಿoದ ಸೋಮವಾರ
ಬೆಳಗ್ಗೆ 7 ಗಂಟೆಯವರೆಗೆ 36 ಗಂಟೆಗಳ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದು, ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುವವರ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್
ಎಚ್ಚರಿಸಿದ್ದಾರೆ.


ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 36 ಗಂಟೆಗಳ ಲಾಕ್ ಡೌನ್ ಅವಧಿಯಲ್ಲಿ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಔಷಧ ಅಂಗಡಿಗಳು ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅನುಮತಿ ನೀಡಿದ್ದು, ಇದರ ಹೊರತು ಇತರೇ ಯಾವುದೇ ಚಟುವಟಕೆಗಳಿಗೆ ಅನುಮತಿ ಇಲ್ಲ, ಈಗಾಗಲೇ ತಹಸೀಲ್ದಾರ್ ಅವರಿಂದ ಮದುವೆಗೆ ಅನುಮತಿ ಪಡೆದವವರು ಮದುವೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!