ಉಡುಪಿ: 767 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ- 400 ಕ್ಕೂ ಅಧಿಕ ಮಂದಿ ಗುಣಮುಖ

ಉಡುಪಿ ಜ.20 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇದು ತಕ್ಕ ಮಟ್ಟಿಗೆ ಸಮಾಧಾನ ತರುವ ವಿಚಾರವಾಗಿದೆ.

ಇಂದು ಜಿಲ್ಲೆಯಲ್ಲಿ ಮತ್ತೆ 700 ಕ್ಕೂ ಅಧಿಕ ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರ ಜೊತೆಗೆ 400 ಕ್ಕೂ ಅಧಿಕ ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು 767 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿ ತಾಲೂಕೊಂದರಲ್ಲೇ 451 ಮಂದಿಯಲ್ಲಿ ಹಾಗೂ ಕುಂದಾಪುರದಲ್ಲಿ  210 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.  ಉಳಿದಂತೆ ಕಾರ್ಕಳದಲ್ಲಿ 104 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.  ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣ ಗಳ ಸಂಖ್ಯೆ ಒಂದೇ ಸಮನೆ 5092 ಕ್ಕೆ ಏರಿಕೆಯಾಗಿದೆ. ಜ.19 ರಂದು ಜಿಲ್ಲೆಯಲ್ಲಿ 439 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಜಿಲ್ಲೆಯಲ್ಲಿ ಯಾರೂ ಕೂಡಾ  ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

Leave a Reply

Your email address will not be published. Required fields are marked *

error: Content is protected !!